ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಎರೆ ಹೊಸೂರು ಗ್ರಾಮದಲ್ಲಿ ಚಿರತೆಯೊಂದು ಆತಂಕ ಸೃಷ್ಟಿಸಿದೆ. ಗ್ರಾಮದ ಹೊಲದಲ್ಲಿ ಕಾಣಿಸಿಕೊಂಡ ಚಿರತೆ ಹಸುವಿನ ಮೇಲೆ ದಾಳಿ ಮಾಡಿ ಬಲಿ ಪಡೆದಿದೆ. ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಸಿಬ್ಬಂದಿ ಪರಿಸ್ಥಿತಿ ಪರಿಶೀಲಿಸಿ, ಚಿರತೆ ಸೆರೆಗಾಗಿ ಬೋನ್ ಇರಿಸಿದ್ದಾರೆ. ಗ್ರಾಮಸ್ಥರಲ್ಲಿ ಭಯ ಮನೆ ಮಾಡಿದ್ದು, ಚಿರತೆ ಶೀಘ್ರ ಸೆರೆಯಾಗುವ ನಿರೀಕ್ಷೆಯಿದೆ.