ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಮುತ್ತಂಗಿ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಶಾಬೋದ್ದೀನ್ ಅವರಿಗೆ ಸೇರಿದ ಗ್ಯಾರೇಜ್ಗೆ ಬೆಂಕಿ ತಗುಲಿ 7 ಬೈಕ್ಗಳು ಸುಟ್ಟು ಕರಕಲಾಗಿವೆ. ಈ ದುರ್ಘಟನೆಯಲ್ಲಿ ಅಂದಾಜು 10 ಲಕ್ಷಕ್ಕೂ ಅಧಿಕ ಮೌಲ್ಯದ ಆಸ್ತಿಪಾಸ್ತಿ ಹಾನಿಯಾಗಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದು, ಮನ್ನಾಏಖ್ಖೇಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.