ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ದೊಡ್ಡಚಲ್ಲೂರು ಗ್ರಾಮದಲ್ಲಿ ಚಿರತೆ ದಾಳಿಗೆ 65 ವರ್ಷದ ರೈತ ರಾಮಚಂದ್ರಪ್ಪ ಬಲಿಯಾಗಿದ್ದಾರೆ. ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಮನೆ ಬಳಿ ದಾಳಿ ನಡೆದಿದ್ದು, ಗಂಭೀರ ಗಾಯಗೊಂಡ ರೈತ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನರಭಕ್ಷಕ ಚಿರತೆಯಿಂದಾಗಿ ಗ್ರಾಮಸ್ಥರಲ್ಲಿ ತೀವ್ರ ಆತಂಕ ಮನೆಮಾಡಿದೆ.