ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸಲು ಆಗಮಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಮುಖ್ಯ ವಕ್ತಾರ ಸೌರವ್ ದಾಸ್ ಮತ್ತು ಅದರ ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅವರು ನಿಷೇಧಾಜ್ಞೆ ಇದ್ದರೂ ಜಂತರ್-ಮಂತರ್ನ ಗೇಟ್ ಹಾರಿ ಒಳಗೆ ಹೋಗಿದ್ದಕ್ಕೆ ಅವರನ್ನು ವಶಕ್ಕೆ ಪಡೆಯಲಾಗಿದೆ.