ಕಿರಿದಾದ ರಸ್ತೆಯಲ್ಲಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಏಕಾಏಕಿ ಹಿಮ್ಮುಖವಾಗಿ ಸಂಚರಿಸಿದ ಕಾರಣ ಭಯದ ವಾತಾವರಣ ನಿರ್ಮಾಣವಾಗಿತ್ತು. ಹಿಂದೆ ಸ್ಕೂಟಿಯಲ್ಲಿ ಬರುತ್ತಿದ್ದ ಮಹಿಳೆ ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ.