ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಕರ್ನಾಟಕ ನೂತನ ಸಿಎಂ ಡಿಕೆ ಶಿವಕುಮಾರ್ ಪ್ರಧಾನಿ ಮೋದಿ ಅಧ್ಯಕ್ಷತೆಯ ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸಿದ್ದಾರೆ. ಇದೇ ಕಾಂಗ್ರೆಸ್ ಸರ್ಕಾರದ ಹಿಂದಿನ ಸಿಎಂ ಸಿದ್ದರಾಮಯ್ಯ ಕಳೆದ 3 ವರ್ಷಗಳಲ್ಲಿ ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸಿರಲಿಲ್ಲ. ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ, ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸುತ್ತೇನೆ ಎಂದು ದೆಹಲಿಗೆ ತೆರಳುವ ಮುನ್ನ ಡಿಕೆ ಶಿವಕುಮಾರ್ ಹೇಳಿದ್ದರು.