ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಮ್ಮ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು, ಈ ಶುಭ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅವರಿಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಸಿದ್ದರಾಮಯ್ಯ ಅವರು, "ರಾಜ್ಯದ ಉಪ ಮುಖ್ಯಮಂತ್ರಿಗಳು ಹಾಗೂ ನನ್ನ ಆತ್ಮೀಯರಾದ ಡಿ.ಕೆ.ಶಿವಕುಮಾರ್ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು," ಎಂದು ಹೇಳಿದ್ದಾರೆ. ಡಿಕೆಶಿಯವರ ನಾಯಕತ್ವ ಗುಣಗಳನ್ನು ಶ್ಲಾಘಿಸಿದ ಅವರು "ನಿಮ್ಮ ಪಕ್ಷ ನಿಷ್ಠೆ, ಸೈದ್ಧಾಂತಿಕ ಬದ್ಧತೆ ಯುವ ಜನರಿಗೆ ಮಾದರಿ. ಜನಸೇವೆಯ ನಿಮ್ಮ ಅಚಲತೆ ಹೀಗೇಯೇ ಮುಂದುವರೆಯಲಿ," ಎಂದು ಆಶಿಸಿದ್ದಾರೆ.