ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ತಾರಕಕ್ಕೇರಿರುವ ಬೆನ್ನಲ್ಲೇ ಮಾಜಿ ಸಚಿವ ಕೆಎನ್ ರಾಜಣ್ಣ ಮಹತ್ವದ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಕ್ತ ಮನಸ್ಸಿನವರಾಗಿದ್ದು, ಹೈಕಮಾಂಡ್ ಮತ್ತು ರಾಹುಲ್ ಗಾಂಧಿ ಅವರು ನೀಡುವ ಯಾವುದೇ ಸೂಚನೆಯನ್ನು ಪಾಲಿಸಲು ಹಾಗೂ ಅಗತ್ಯಬಿದ್ದರೆ ಅಧಿಕಾರ ತ್ಯಾಗ ಮಾಡಲೂ ಸಿದ್ಧರಾಗಿದ್ದಾರೆ ಎಂದು ರಾಜಣ್ಣ ತಿಳಿಸಿದ್ದಾರೆ. ಸಿಎಂ ಅವರ ಈ ನಿಲುವಿಗೆ ಎಲ್ಲಾ ಸಚಿವರು ಸಹಮತ ವ್ಯಕ್ತಪಡಿಸಿದ್ದು, ಮೇ 4ರ ನಂತರ ಹೈಕಮಾಂಡ್ ತೆಗೆದುಕೊಳ್ಳುವ ಅಂತಿಮ ತೀರ್ಮಾನದಂತೆ ನಾವೆಲ್ಲರೂ ನಡೆದುಕೊಳ್ಳಲಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.