ಕರ್ನಾಟಕ ವಿಧಾನಸಭೆ ಅಧಿವೇಶನದಲ್ಲಿ ನಡೆದ ಗದ್ದಲದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಪಕ್ಷ ಬಿಜೆಪಿ ಶಾಸಕರ ಮೇಲೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸದನದ ಕಲಾಪವನ್ನು ಉದ್ದೇಶಪೂರ್ವಕವಾಗಿ ಅಡ್ಡಿಪಡಿಸುತ್ತಿರುವುದನ್ನು ಖಂಡಿಸಿದ ಸಿಎಂ, ಈ ನಡವಳಿಕೆ ನಿಯಮಗಳಿಗೆ ವಿರುದ್ಧವಾಗಿದೆ ಎಂದು ಹೇಳಿದರು. "ಜಿ ರಾಮ್ ಜಿ ಕಾಯ್ದೆ" ಕುರಿತು ಚರ್ಚೆ ಆರಂಭಿಸುತ್ತಿದ್ದಂತೆ ವಿರೋಧ ಪಕ್ಷದ ಶಾಸಕರು ಆಕ್ಷೇಪ ವ್ಯಕ್ತಪಡಿಸಿ ಗದ್ದಲ ಸೃಷ್ಟಿಸಿದ್ದು ಸಿಎಂ ಸಿಟ್ಟಿಗೆ ಕಾರಣವಾಯಿತು.