ವಂದೇ ಮಾತರಂ ಗೀತೆಗೆ ಅವಮಾನಿಸಿದ ಆರೋಪ ಸಂಬಂಧ ‘ಕೈ’ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಮಂಗಳೂರಿನ ಉರ್ವಾ ಪೊಲೀಸ್ ಠಾಣೆಗೆ ಬಿಜೆಪಿ ಮುಖಂಡ ವಿಕಾಸ್ ಪುತ್ತೂರು ದೂರು ನೀಡಿದ್ದಾರೆ. ರಾಷ್ಟ್ರಗಾನಕ್ಕೆ ಅಪಮಾನ ಮಾಡಿ ಉದ್ದೇಶಪೂರ್ವಕವಾಗಿ ಶಾಂತಿಭಂಗ ತಂದ ಆರೋಪ ಸಂಬಂಧ FIR ದಾಖಲಿಸುವಂತೆ ಅವರು ಆಗ್ರಹಿಸಿದ್ದು, ಇಲ್ಲದಿದ್ರೆ ಕೋರ್ಟ್ಗೆ ಖಾಸಗಿ ದೂರು ದಾಖಲಿಸ್ತೇನೆ ಎಂದು ತಿಳಿಸಿದ್ದಾರೆ. ದೂರು ಸ್ವೀಕರಿಸಿ ತಜ್ಞರ ಅಭಿಪ್ರಾಯ ಪಡೆಯೋದಾಗಿ ಪೊಲೀಸರು ತಿಳಿಸಿದ್ದಾರೆ ಎನ್ನಲಾಗಿದೆ.