ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಸಿಎಂ ಕುರ್ಚಿ ಗೊಂದಲ ಕುರಿತು ಮಾತನಾಡಿದ್ದಾರೆ. ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಈ ಮೂವರಿಗೆ ಮಾತ್ರ ಸಿಎಂ ಕುರ್ಚಿ ಕಾಳಗದ ಬಗ್ಗೆ ಗೊತ್ತಿದ್ದು, ಹೈಕಮಾಂಡ್ ಯಾವುದೇ ಕಾರಣಕ್ಕೂ ಅಸಹಾಯಕವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಎಐಸಿಸಿ ಅಧ್ಯಕ್ಷರು ಪ್ರೋಟೋಕಾಲ್ನಿಂದಾಗಿ ಸರ್ಕಾರದ ಕಾರ್ಯಕ್ರಮಕ್ಕೆ ಗೈರಾಗಿದ್ದರು ಎಂದಿದ್ದಾರೆ.