ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ವಿನೂತನ ಪ್ರತಿಭಟನೆ ನಡೆಸಿದರು. ದಾವಣಗೆರೆ ಸಮಾವೇಶದಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ, ಅಣಕು ವೈದ್ಯಕೀಯ ತಪಾಸಣೆ ನಡೆಸಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಅವರನ್ನು ನಿಮ್ಹಾನ್ಸ್ಗೆ ದಾಖಲಿಸುವಂತೆ ಒತ್ತಾಯಿಸಿದರು.