ನೀರು ಕುಡಿಯಲು ಬಂದ ಕಾಡಾನೆಯೊಂದು ಕೆರೆಗೆ ಬಿದ್ದು, ಮೇಲೇಳಲಾರದೆ ಒದ್ದಾಡಿದ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಚೆಂಬೆ ಬೆಳ್ಳೂರು ಗ್ರಾಮದಲ್ಲಿ ನಡೆದಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಕಾಡಾನೆ ಮೇಲೆತ್ತಲು ಕಾರ್ಯಾಚರಣೆ ನಡೆಸಿದ್ದಾರೆ. ಸದ್ಯ, ಕಾಡಾನೆಯ ಪರದಾಟದ ವಿಡಿಯೋ ವೈರಲ್ ಆಗುತ್ತಿದೆ.