ರಾಜ್ಯದಲ್ಲಿ ತಲೆದೋರಿರುವ ಬರಗಾಲದ ಭೀಕರ ಪರಿಸ್ಥಿತಿ ಮತ್ತು ತೀವ್ರ ಮುಂಗಾರು ಮಳೆ ಕೊರತೆಯಿಂದಾಗಿ ತಮಿಳುನಾಡಿಗೆ ಕಾವೇರಿ ನೀರು ಬಿಡದಿರಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಆದೇಶ ಹೊರಡಿಸಿದೆ. ಜುಲೈ 26ರ ನಂತರ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆಗಳಿದ್ದು, ಈ ಕುರಿತು ನಿಖರ ಮಾಹಿತಿ ಲಭ್ಯವಾದ ಬಳಿಕ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಲಾಗಿದೆ.