ಬೆಂಗಳೂರಿನ ಕೆ.ಆರ್. ಮಾರ್ಕೆಟ್ನಲ್ಲಿರುವ ಅಣ್ಣಮ್ಮ ದೇವಸ್ಥಾನದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ವಿಶೇಷ ಪೂಜೆ ಸಲ್ಲಿಸಿ, 501 ರೂ. ನಾಣ್ಯಗಳ ಹರಕೆ ತೀರಿಸಿದ್ದಾರೆ. ದೇವಸ್ಥಾನದ ಧರ್ಮದರ್ಶಿ ಜಯಣ್ಣ ನೇತೃತ್ವದಲ್ಲಿ ಪೂಜೆ ನೆರವೇರಿದ್ದು, ಸಚಿವ ರಾಮಲಿಂಗಾ ರೆಡ್ಡಿ ಹಾಗೂ ಪುತ್ರಿ ಐಶ್ವರ್ಯ ಹೆಗಡೆ ಉಪಸ್ಥಿತರಿದ್ದರು. ಭದ್ರತಾ ದೃಷ್ಟಿಯಿಂದ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.