ಉತ್ತರ ಕನ್ನಡದ ದಾಂಡೇಲಿ ನಗರದ 3ನೇ ಗೇಟ್ ಬಳಿ ಚರಂಡಿಯಲ್ಲಿ ಮೊಸಳೆ ಪ್ರತ್ಯಕ್ಷವಾಗಿ ಸ್ಥಳೀಯರಲ್ಲಿ ತೀವ್ರ ಆತಂಕ ಮೂಡಿಸಿತು. ಮಾಹಿತಿ ನೀಡಿದರೂ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಬರಲಿಲ್ಲ. ಅನಿವಾರ್ಯವಾಗಿ ಸ್ಥಳೀಯರೇ ಮೊಸಳೆಯನ್ನು ಸುರಕ್ಷಿತವಾಗಿ ಹಿಡಿದು ಕಾಳಿ ನದಿಗೆ ಬಿಟ್ಟರು. ಇಲಾಖೆಯ ನಿರ್ಲಕ್ಷ್ಯ ಮತ್ತು ಕರ್ತವ್ಯ ಲೋಪದ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.