ದಾವಣಗೆರೆಯಲ್ಲಿ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಿಲ್ಲಾ ಪೊಲೀಸರು ಭವ್ಯ ಪಥ ಸಂಚಲನ ನಡೆಸಿದರು. ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಹೆಚ್.ಟಿ. ಶೇಖರ್ ಅವರ ನೇತೃತ್ವದಲ್ಲಿ ಈ ಪಥ ಸಂಚಲನವು ನಗರದ ಪ್ರಮುಖ ಪ್ರದೇಶಗಳಲ್ಲಿ ನಡೆಯಿತು.