ದಾವಣಗೆರೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಮಾಜಿ ಶಾಸಕ ರೇಣುಕಾಚಾರ್ಯ ಮತ್ತು ಸಂಸದ ಬಿ.ವೈ ರಾಘವೇಂದ್ರ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಡಿಕೆಶಿ ತಮಾಷೆಯಾಗಿ ರೇಣುಕಾಚಾರ್ಯ ಅವರ ಕೆನ್ನೆಗೆ ಹೊಡೆದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನೆಟ್ಟಿಗರು ಇವರ ಸ್ನೇಹವನ್ನು ಶ್ಲಾಘಿಸಿದ್ದು, ಇದು ರಾಜಕೀಯದಲ್ಲಿ ಸೌಹಾರ್ದತೆಯ ಸಂಕೇತವಾಗಿದೆ.