ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪತ್ನಿ ಉಷಾ ಜೊತೆ ಕೊಡಗಿನ ಭಾಗಮಂಡಲದ ಭಗಂಡೇಶ್ವರ ದೇವಾಲಯಕ್ಕೆ ಭೇಟಿ ನೀಡಿದರು. ಗಣಪತಿ ಮಂತ್ರಗಳ ಪಠಣದೊಂದಿಗೆ ವಿಶೇಷ ಪೂಜೆ ಸಲ್ಲಿಸಿ ದೇವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಉಸ್ತುವಾರಿ ಸಚಿವ ನರೇಂದ್ರಸ್ವಾಮಿ ಅವರು ಉಪಮುಖ್ಯಮಂತ್ರಿಗಳಿಗೆ ಸಾಥ್ ನೀಡಿದರು. ರಾಜ್ಯದ ಒಳಿತಿಗಾಗಿ ಅವರು ಪ್ರಾರ್ಥಿಸಿದರು.