ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದಾವಣಗೆರೆಗೆ ಭೇಟಿ ನೀಡಿ, ಮುಂಬರುವ ಉಪಚುನಾವಣೆಗಳ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಅವರು ಪ್ರಸಿದ್ಧ ದಾವಣಗೆರೆ ಬೆಣ್ಣೆ ದೋಸೆಯನ್ನು ಸವಿದಿದ್ದಾರೆ. ಸಚಿವ ಮುನಿಯಪ್ಪ ಮತ್ತು ಶಾಸಕ ಹ್ಯಾರಿಸ್ ಡಿಕೆಶಿಗೆ ಸಾಥ್ ನೀಡಿದರು. ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಚುನಾವಣೆ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ.