ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆತಂಕಕಾರಿ ಘಟನೆಯೊಂದು ವರದಿಯಾಗಿದೆ. ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ಖಾಸಗಿ ಬಸ್ ನಿಲ್ದಾಣದಲ್ಲಿ ಬಸ್ ಚಾಲಕರೊಬ್ಬರ ಮೇಲೆ ಕಬ್ಬಿಣದ ರಾಡ್ನಿಂದ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಈ ಘಟನೆ ಪ್ರಯಾಣಿಕರ ಕಣ್ಮುಂದೆಯೇ ನಡೆದಿದ್ದು, ಸಾರ್ವಜನಿಕರಲ್ಲಿ ಭೀತಿ ಮೂಡಿಸಿದೆ. ಬಸ್ ವೇಳಾಪಟ್ಟಿ ವಿಚಾರವಾಗಿ ಉಂಟಾದ ವಿವಾದವೇ ಹಲ್ಲೆಗೆ ಕಾರಣ ಎಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ.