ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ನಿರಂತರ ಭಾರೀ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ದೂದಗಂಗಾ ನದಿ ಪ್ರವಾಹದ ಮಟ್ಟ ಮೀರಿ ಹರಿಯುತ್ತಿದೆ. ಮುಲ್ಲಾನ್ಕಿ ಗ್ರಾಮದ ಮನ್ಸೂರ್ ಅಲಿ ದರ್ಗಾ ಜಲಾವೃತವಾಗಿದ್ದು, ನದಿ ತೀರದ ಜಮೀನುಗಳಿಗೆ ನೀರು ನುಗ್ಗಿ ಅಪಾರ ಹಾನಿಯಾಗಿದೆ. ಸ್ಥಳೀಯರು ಆತಂಕಗೊಂಡಿದ್ದು, ಪರಿಸ್ಥಿತಿ ಗಂಭೀರವಾಗಿದೆ.