ಕರ್ನಾಟಕ ಮತ್ತು ತಮಿಳುನಾಡು ಸಂಪರ್ಕಿಸುವ ದಿಂಬಂ ಘಾಟ್ ರಸ್ತೆಯಲ್ಲಿ ಹಾಸನದಿಂದ ತಮಿಳುನಾಡಿಗೆ ತೆರಳುತ್ತಿದ್ದ ಕಾರು ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ. ಕಾರಿನಲ್ಲಿದ್ದ ಹಾಸನ ಮೂಲದ ಆರು ಮಂದಿ ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳಾಗಿವೆ. ತಮಿಳುನಾಡು ಪೊಲೀಸರು ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.