ತಮಿಳುನಾಡಿನ ದಿಂಡಿಗಲ್ ಸಮೀಪ ಅತಿವೇಗದ ಚಾಲನೆಯಿಂದ ಭೀಕರ ಬೈಕ್ ಅಪಘಾತ ಸಂಭವಿಸಿದೆ. 60 ಕಿ.ಮೀ ವೇಗದ ಮಿತಿ ಇರುವ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿವಿ ದೃಶ್ಯಾವಳಿಗಳು ವೈರಲ್ ಆಗುತ್ತಿವೆ. ಬಲ ತಿರುವು ಪಡೆಯುತ್ತಿದ್ದ ಬೈಕ್ಗೆ ಹಿಂದಿನಿಂದ ಬಂದ ವೇಗದ ಬೈಕ್ ಡಿಕ್ಕಿ ಹೊಡೆದಿದೆ. ವೇಗ ನಿಯಂತ್ರಿಸಲಾಗದ ಕಾರಣ ಇಬ್ಬರೂ ಸವಾರರು ರಸ್ತೆಗೆ ಬಿದ್ದಿದ್ದಾರೆ. ಇದು ರಸ್ತೆ ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.