ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ವಿಚಾರದಲ್ಲಿ ಮಾಜಿ ಶಾಸಕ ಡಿ.ಎನ್. ಜೀವರಾಜ್ ಅಧಿಕಾರಿಗಳನ್ನು ದುರುಪಯೋಗಪಡಿಸಿಕೊಂಡು ಕ್ರಿಮಿನಲ್ ಆಕ್ಟಿವಿಟಿಸ್ ಮಾಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಇದು ಸಿಸ್ಟಮೆಟಿಕ್ ಕ್ರೈಮ್ ಆಗಿದ್ದು, ವರದಿ ಬಂದಿದ್ದು, ಕಾನೂನು ಹೋರಾಟ ನಡೆಸಲಾಗುವುದು ಎಂದು ತಿಳಿಸಿದ್ದಾರೆ.