ಬಿಜೆಪಿ ಶಾಸಕ ಮುನಿರತ್ನ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಅವರ ಅಧಿಕೃತ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಡಿ.ಕೆ.ಶಿವಕುಮಾರ್ ಅವರು ಮುನಿರತ್ನ ಅವರನ್ನು ಭುಜ ತಟ್ಟಿ ಆತ್ಮೀಯವಾಗಿ ಸ್ವಾಗತಿಸಿದರು. ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಸಂದರ್ಭದಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ.