ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿ ಮಾಡಿದರು. ಪತ್ನಿ ಉಷಾ ಮತ್ತು ಸಹೋದರ ಡಿ.ಕೆ. ಸುರೇಶ್ ಅವರೊಂದಿಗೆ ನಡೆದ ಈ ಮಹತ್ವದ ಸಭೆಯಲ್ಲಿ ಸಂಪುಟ ವಿಸ್ತರಣೆ ಹಾಗೂ ಸಚಿವರ ಎರಡನೇ ಪಟ್ಟಿ ಕುರಿತು ಚರ್ಚಿಸಲಾಯಿತು. ಉಭಯ ನಾಯಕರು ಶೀಘ್ರದಲ್ಲೇ ದೆಹಲಿಗೆ ತೆರಳಲಿದ್ದಾರೆ.