ದೆಹಲಿಯಿಂದ ಬೆಂಗಳೂರಿಗೆ ವಾಪಸಾದ ಡಿ.ಕೆ.ಸುರೇಶ್ ಅವರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಅಲ್ಲಿಂದ ತಮ್ಮ ನಿವಾಸದತ್ತ ಪ್ರಯಾಣ ಬೆಳೆಸಿದರು. ಅವರೊಂದಿಗೆ ಶಾಸಕರಾದ ಪ್ರದೀಪ್ ಈಶ್ವರ್, ರಂಗನಾಥ್, ಎಂಎಲ್ಸಿ ರವಿ ಹಾಗೂ ಕೆಪಿಸಿಸಿ ಖಜಾಂಚಿ ವಿನಯ್ ಕಾರ್ತಿಕ್ ಸೇರಿದಂತೆ ಹಲವು ನಾಯಕರು ಇದ್ದರು.