ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿರುವ ಆಸ್ಪತ್ರೆಯೊಂದರಲ್ಲಿ ವೈದ್ಯರೊಬ್ಬರು ಆಸ್ಪತ್ರೆಯ ಬೆಡ್ ಮೇಲಿದ್ದ ರೋಗಿಯ ಮೇಲೆ ಹಲ್ಲೆ ನಡೆಸಿದ್ದಾರೆ. ಶಿಮ್ಲಾದಲ್ಲಿರುವ ಇಂದಿರಾ ಗಾಂಧಿ ಮೆಡಿಕಲ್ ಕಾಲೇಜಿನಲ್ಲಿ ರೋಗಿ ಹಾಗೂ ವೈದ್ಯ ಪರಸ್ಪರ ಬಡಿದಾಡಿಕೊಂಡಿದ್ದಾರೆ. ಆ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.