ಕೆಟ್ಟು ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ರಾಜೇಶ್ವರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 65ರಲ್ಲಿ ನಡೆದಿದೆ. ಚಿಟಗುಪ್ಪಾ ತಾಲೂಕಿನ ಇಟಾಗಾ ಗ್ರಾಮದ ಜೈಭೀಮ್(36) ಮೃತ ದುರ್ದೈವಿಯಾಗಿದ್ದು, ಹುಮ್ನಾಬಾದ್ನಿಂದ ಬಸವಕಲ್ಯಾಣಕ್ಕೆ ತೆರಳುತ್ತಿದ್ದ ಕಾರು ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಗೆ ಗುದ್ದಿದೆ. ಇದೇ ವೇಳೆ ಹಿಂದಿನಿಂದ ಬರ್ತಿದ್ದ ಮತ್ತೊಂದು ಲಾರಿ ಕಾರಿಗೆ ಡಿಕ್ಕಿಯಾಗಿದ್ದು, ಬಸವಕಲ್ಯಾಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.