ನಕಲಿ ಕೀ ಬಳಸಿ ಮದುವೆ ವಾರ್ಷಿಕೊತ್ಸವದ ಸಂಭ್ರಮದ ಮನೆಯಲ್ಲಿ ಕಳ್ಳತನ ನಡೆಸಿರುವ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶಂಕರ್ ಎಂಬುವವರ ಮನೆಯಲ್ಲಿ 18 ಲಕ್ಷ ಮೌಲ್ಯದ 160 ಗ್ರಾಂ ಚಿನ್ನಾಭರಣವನ್ನು ಖದೀಮರು ದೋಚಿ ಪರಾರಿಯಾಗಿದ್ದಾರೆ.ಮಗಳ ಮದುವೆ ವಾರ್ಷಿಕೋತ್ಸವ ಹಿನ್ನೆಲೆ ಮನೆಗೆ ಬೀಗ ಹಾಕಿ ಕುಟುಂಬಸ್ಥರು ಚಾಮುಂಡಿ ಬೆಟ್ಟಕ್ಕೆ ತೆರಳಿದ್ದರು. ವಾಪಸ್ ಬಂದು ನೋಡಿದಾಗ ಕಳ್ಳತನ ಬೆಳಕಿಗೆ ಬಂದಿದೆ.