ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾಗಿದ್ದಾರೆ. ಡಿಕೆಶಿ ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಭೇಟಿಗೆ ಮುಂದಾಗಿದ್ದರು. ಆದರೆ, ಕಾರಣಾಂತರಗಳಿಂದ ಅದು ಸಾಧ್ಯವಾಗಿರಲಿಲ್ಲ. ಹೀಗಾಗಿ ಸದ್ಯ ಬೆಂಗಳೂರಿನಲ್ಲಿರುವ ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾಗಿದ್ದಾರೆ ಎನ್ನಲಾಗಿದೆ.