ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ, ಹೊಸರೋಡ್ ಬಳಿ ನಡೆದ ಬೈಕ್ ಅಪಘಾತದಲ್ಲಿ ಮಹಿಳೆಯೊಬ್ಬರಿಗೆ ಗಂಭೀರ ಗಾಯವಾಗಿದೆ. ಹೊಸೂರು ರಸ್ತೆಯಲ್ಲಿ ಚಲಿಸುತ್ತಿದ್ದಾಗ ಬೈಕ್ ನಿಯಂತ್ರಣ ತಪ್ಪಿ ಮುಂದಿದ್ದ ಆಟೋಗೆ ಡಿಕ್ಕಿ ಹೊಡೆದಿದೆ. ಅಪಘಾತದ ದೃಶ್ಯ ಡ್ಯಾಶ್ಬೋರ್ಡ್ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.