ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಸಫಾರಿ ವಾಹನದ ಮೇಲೆ ಸಾಕಾನೆ ದಾಳಿ ನಡೆಸಿರುವ ಘಟನೆ ನಡೆದಿದೆ. ನಿನ್ನೆ ಮಧ್ಯಾಹ್ನ ಘಟನೆ ನಡೆದಿದ್ದು, ಆನೆ ದಾಳಿಯಿಂದ ಪ್ರವಾಸಿಗರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಘಟನೆಯಲ್ಲಿ ಸಫಾರಿ ವಾಹನದ ಮಿರರ್ ಪುಡಿ ಪುಡಿಯಾಗಿದ್ದು, ವನರಾಜನ ದಾಳಿಗೆ ಪ್ರವಾಸಿಗರು ಬೆಚ್ಚಿಬಿದ್ದಿದ್ದಾರೆ. ಬನ್ನೇರುಘಟ್ಟ ಸಫಾರಿಯಲ್ಲಿ ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಯಾಗಿದ್ದು, ಬಳಿಕ ಸ್ಥಳಕ್ಕೆ ಮಾವುತ, ಕಾವಡಿಗಳು ಬರುತ್ತಿದ್ದಂತೆ ವನರಾಜ ಕೂಲ್ ಆಗಿದ್ದಾನೆ.