ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಧನ್ನೂರು ಗ್ರಾಮದ ಬಳಿ ಎಥೆನಾಲ್ ಟ್ಯಾಂಕರ್ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ಟ್ಯಾಂಕರ್ ಚಲಿಸುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಚಾಲಕ ಕೆಳಗಿಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೆಲವೇ ಕ್ಷಣಗಳಲ್ಲಿ ಟ್ಯಾಂಕರ್ ಧಗಧಗಿಸಿ ಹೊತ್ತಿ ಉರಿದಿದೆ. ಈ ಘಟನೆಯು ಹುನಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಸಾರ್ವಜನಿಕರು ಆತಂಕಗೊಂಡಿದ್ದರು.