ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಪೂಜೆ ಸಲ್ಲಿಸಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹರಪನಹಳ್ಳಿ ಗ್ರಾಮದ ದೇವೇಶ್ವರಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ ಹೆಚ್ಡಿಡಿ, ಪುತ್ರ ಹೆಚ್.ಡಿ.ರೇವಣ್ಣ ಮತ್ತು ಸೊಸೆ ಭವಾನಿ ರೇವಣ್ಣ ಜೊತೆ ಪೂಜೆಯಲ್ಲಿ ಭಾಗಿಯಾದರು. ಹಾಸನದಲ್ಲಿನ ಜೆಡಿಎಸ್ ಕಾರ್ಯಕರ್ತರ ಸಮಾವೇಶಕ್ಕೂ ಮುನ್ನ ಅವರು ದೇಗುಲಕ್ಕೆ ಭೇಟಿ ನೀಡಿದ್ದರು.