ಬಂಡೀಪುರ ಸಫಾರಿ ನಿಲ್ಲಿಸಬೇಕು ಹಾಗೂ ಅನ್ನದಾತರ ಹಲವು ಸಮಸ್ಯೆಗಳನ್ನು ಬಗೆಹರಿಸುವಂತೆ ರೈತ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದವು. ಗುಂಡ್ಲುಪೇಟೆಯ ಬೋಗಪ್ಪ ಕ್ರೀಡಾಂಗಣದಿಂದ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಬಳಿಕ ತಾಲೂಕು ಕಛೇರಿಯ ಮುಂದೆ ಪ್ರತಿಭಟನೆ ನಡೆಸಿದರು.