ಬೀದರ್ ತಾಲೂಕಿನ ರುದನೂರು ಗ್ರಾಮದ ಬಳಿ ಬೈಕ್ಗೆ ಟಿಪ್ಪರ್ ಡಿಕ್ಕಿಯಾಗಿ ಗಾಯಗೊಂಡಿದ್ದ ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಬೈಕ್ನಲ್ಲಿ ಇಬ್ಬರು ತೆರಳುತ್ತಿದ್ದ ವೇಳೆ ಟಿಪ್ಪರ್ ಡಿಕ್ಕಿ ಹೊಡೆದಿತ್ತು. ಗಂಭೀರ ಗಾಯಗೊಂಡಿದ್ದ ಇಬ್ಬರನ್ನು ಬ್ರಿಮ್ಸ್ಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಆಕಾಶ್(28) ಮತ್ತು ಮಾರುತಿ(32) ಮೃತಪಟ್ಟಿದ್ದಾರೆ. ಮೃತ ಆಕಾಶ್ ಹಾಗೂ ಮಾರುತಿ ಗರ್ಮಾ ತಾಂಡಾದ ನಿವಾಸಿಗಳು ಎಂಬುದು ಗೊತ್ತಾಗಿದೆ.