ಹಲವು ದಿನಗಳಿಂದ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ. ತುಮಕೂರು ಜಿಲ್ಲೆ ತಿಪಟೂರಿನ ದಾಸಿಹಳ್ಳಿ ಗ್ರಾಮದಲ್ಲಿ ಕಳೆದ ಒಂದು ತಿಂಗಳಿಂದ ಗ್ರಾಮದ ಸುತ್ತಮುತ್ತ ಓಡಾಡುತ್ತಿದ್ದ ಚಿರತೆ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದ್ದು, ಆತಂಕದಲ್ಲಿದ್ದ ಗ್ರಾಮಸ್ಥರು ನಿಟ್ಟುಸಿರುಬಿಟ್ಟಿದ್ದಾರೆ.