ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ 'ಬ್ರಿಗೇಡ್ 7 ಗಾರ್ಡನ್ಸ್' ಅಪಾರ್ಟ್ಮೆಂಟ್ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಉತ್ತರಹಳ್ಳಿಯ ಬ್ರಿಗೇಡ್ 7 ಗಾರ್ಡನ್ಸ್ ಅಪಾರ್ಟ್ಮೆಂಟ್ನ ಡಿ-ಬ್ಲಾಕ್ನಲ್ಲಿರುವ 8ನೇ ಮಹಡಿಯ 3ಬಿಎಚ್ಕೆ ಫ್ಲಾಟ್ನಲ್ಲಿ ಈ ಅಗ್ನಿ ದುರಂತ ಸಂಭವಿಸಿದೆ. ಬೆಂಕಿ ಹೊತ್ತಿಕೊಂಡ ತಕ್ಷಣವೇ ಸಕಾಲಿಕ ತುರ್ತು ಕ್ರಮಗಳಿಂದಾಗಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಫ್ಲಾಟ್ನಲ್ಲಿ ಸಂಭವಿಸಿದ ವಿದ್ಯುತ್ ಶಾರ್ಟ್ ಸರ್ಕಿಟ್ ಕಾರಣದಿಂದಾಗಿ ಈ ಬೆಂಕಿ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.