ಚಿಕ್ಕಮಗಳೂರು ನಗರದ ಮಾರ್ಕೆಟ್ ರಸ್ತೆಯಲ್ಲಿನ ಹಳೆಯ ಮರದ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಬೆಂಕಿಯ ಜ್ವಾಲೆಗೆ ಲಕ್ಷಾಂತರ ಮೌಲ್ಯದ ಮರಗಳು ಸಂಪೂರ್ಣ ಸುಟ್ಟು ಭಸ್ಮವಾಗಿವೆ. ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸಪಟ್ಟಿದ್ದು, ಚಿಕ್ಕಮಗಳೂರು ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಲಕ್ಷಾಂತರ ಮೌಲ್ಯದ ಮರಗಳನ್ನ ಕಳೆದುಕೊಂಡು ಮಾಲೀಕ ಕಂಗಾಲಾಗಿದ್ದು, ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದೆ.