ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಗೌರಿಪುರ ಗ್ರಾಮದಲ್ಲಿ ಆಘಾತಕಾರಿ ಘಟನೆಯೊಂದು ವರದಿಯಾಗಿದೆ. ಕುರ್ಕುರೆ ಪ್ಯಾಕೆಟ್ನಲ್ಲಿ ಸಿಕ್ಕ ಪ್ಲಾಸ್ಟಿಕ್ ಬಾಲ್ ಅನ್ನು ನುಂಗಿ ಐದು ವರ್ಷದ ಬಾಲಕನೊಬ್ಬ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ. ಮಗು ತಿನ್ನುತ್ತಿದ್ದ ಕುರ್ಕುರೆ ಪ್ಯಾಕೆಟ್ನಲ್ಲಿ ಪ್ಲಾಸ್ಟಿಕ್ ಬಾಲ್ ಇದ್ದು, ಆ ಬಾಲ್ ಆಕಸ್ಮಿಕವಾಗಿ ಮಗುವಿನ ಗಂಟಲಲ್ಲಿ ಸಿಕ್ಕಿಹಾಕಿಕೊಂಡಿದೆ. ಇದರಿಂದ ಬಾಲಕ ಉಸಿರಾಡಲು ಕಷ್ಟಪಟ್ಟು ಅಸ್ವಸ್ಥನಾಗಿದ್ದಾನೆ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ.