ಬೀದರ್ನ ಕಮಲನಗರ ತಾಲೂಕಿನ ಹಂದಿಕೇರಾ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ಮೇವು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಬಿಳಿ ಜೋಳದ ಒಣ ಮೇವು ತುಂಬಿದ್ದ ಕಾರಣ ಬೆಂಕಿ ವೇಗವಾಗಿ ಹರಡಿ ಟ್ರ್ಯಾಕ್ಟರ್ ಮತ್ತು ಮೇವು ಸುಟ್ಟು ಕರಕಲಾಗಿವೆ. ಈ ಘಟನೆಯಿಂದ ರೈತ ಕಂಗಾಲಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸಿದ್ದಾರೆ. ವಿದ್ಯುತ್ ತಂತಿಗಳ ಅಪಾಯ ಕುರಿತು ಜಾಗೃತಿ ಮೂಡಿಸಲು ಇದು ಮತ್ತೊಂದು ನಿದರ್ಶನ.