ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಅವರನ್ನು ನೋಡಲು ಅಭಿಮಾನಿಗಳ ನಡುವೆ ನೂಕುನುಗ್ಗಲು ಉಂಟಾಗಿದೆ. ಜೈ ಜಗನ್ ಎಂದು ಘೋಷಣೆಗಳನ್ನು ಕೂಗಿದ ಅಭಿಮಾನಿಗಳನ್ನು ನಿಯಂತ್ರಿಸಲು ಅಧಿಕಾರಿಗಳು ಹರಸಾಹಸ ಪಟ್ಟ ಪ್ರಸಂಗ ನಡೆದಿದೆ.