ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರರನ್ನು ಜಾರಿ ನಿರ್ದೇಶನಾಲಯ (ED) ಸತತ 3 ಗಂಟೆಗಳಿಂದ ವಿಚಾರಣೆಗೊಳಪಡಿಸಲಾಗಿದೆ. ಈಗಾಗಲೇ ಪ್ರಾಥಮಿಕ ಚಾರ್ಜ್ಶೀಟ್ ಸಲ್ಲಿಕೆಯಾಗಿದ್ದು, ಹೆಚ್ಚಿನ ಮಾಹಿತಿ ಪಡೆಯಲು ಸಮನ್ಸ್ ನೀಡಲಾಗಿತ್ತು. ನಾಗೇಂದ್ರ ಅವರು ಈ ಹಿಂದೆ 3 ತಿಂಗಳು ಜೈಲಿನಲ್ಲಿದ್ದು, ಹೈಕೋರ್ಟ್ನಿಂದ ಜಾಮೀನು ಪಡೆದಿದ್ದರು.