ಸಚಿವ ಡಾ.ಜಿ.ಪರಮೇಶ್ವರ್ ಅವರು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದು ರಾಜಕೀಯ ಕಾರಣಕ್ಕಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕೈಗಾರಿಕಾ ಇಲಾಖೆಗೆ ಸಂಬಂಧಿಸಿದ ಕೆಲಸದ ನಿಮಿತ್ತ ಭೇಟಿ ಮಾಡಿದ್ದೆ. ಈ ಹಿಂದೆ ಒಟ್ಟಾಗಿ ಸರ್ಕಾರ ನಡೆಸಿದ ಅನುಭವವಿದ್ದು, ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ತಿಳಿಸಿದ್ದಾರೆ.