ಗದಗ ನಗರದ ದಾಸರ ಓಣಿಯಲ್ಲಿ ಮಹಿಳೆಯರ ಫೋಟೋ ಕ್ಲಿಕ್ಕಿಸುತ್ತಿದ್ದ ವ್ಯಕ್ತಿಗೆ ತಕ್ಕ ಪಾಠ ಕಲಿಸಿದ್ದಾರೆ. ಆಕ್ರೋಶಗೊಂಡ ಮಹಿಳೆಯರು ಕಿಡಿಗೇಡಿ ವ್ಯಕ್ತಿಗೆ ಧರ್ಮದೇಟು ನೀಡಿ, ಸಖತ್ ಮಂಗಳಾರತಿ ಮಾಡಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಹಿಳೆಯರು ಆ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಇದರಿಂದ ಇಂತಹ ಕೃತ್ಯ ಎಸಗುವವರಿಗೆ ಎಚ್ಚರಿಕೆ ರವಾನೆಯಾಗಿದೆ.