ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಗ್ರಾಮದಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ತೀವ್ರವಾಗಿದೆ. ಭಾರತ್ ಗ್ಯಾಸ್ ಏಜೆನ್ಸಿ ಮುಂದೆ ನೂರಾರು ಜನ ಗಂಟೆಗಟ್ಟಲೆ ಸರದಿಯಲ್ಲಿ ನಿಲ್ಲುತ್ತಿದ್ದಾರೆ. ಸಿಲಿಂಡರ್ಗಳು ಸಕಾಲಕ್ಕೆ ದೊರೆಯದೆ, ಮೂರ್ನಾಲ್ಕು ದಿನಗಳಿಂದಲೂ ಪರದಾಡುತ್ತಿದ್ದಾರೆ. ಹಬ್ಬಗಳಿರುವ ಹಿನ್ನೆಲೆಯಲ್ಲಿ ಜನರಲ್ಲಿ ಆತಂಕ ಹೆಚ್ಚಿದೆ.