ವಾಡಿಕೆಯಂತೆ ಈ ವರ್ಷವೂ ಮಕರ ಸಂಕ್ರಾಂತಿ ದಿನ ಸೂರ್ಯ ರಶ್ಮಿ ಬೆಂಗಳೂರಿನ ಗವಿಪುರಂ ಗುಟ್ಟಹಳ್ಳಿಯಲ್ಲಿರುವ ಗವಿಗಂಗಾಧರೇಶ್ವರ ದೇವಾಲಯದಲ್ಲಿ ಶಿವಲಿಂಗವನ್ನು ಸ್ಪರ್ಶಿಸಿದೆ. ಸುಮಾರು 2 ನಿಮಿಷ ಶಿವಲಿಂಗವನ್ನು ಸುರ್ಯ ರಶ್ಮಿ ಸ್ಪರ್ಶಿಸಿದ್ದು, ಭಕ್ತರು ಅಪರೂಪದ ದೃಶ್ಯವನ್ನು ಕಣ್ತುಂಬಿಕೊಂಡರು. ಮೋಡ ಕವಿದ ವಾತಾವರಣದಿಂದಾಗಿ 2025ರಲ್ಲಿ ಸೂರ್ಯರಶ್ಮಿ ಶಿವಲಿಂಗವನ್ನು ಸ್ಪರ್ಶಿಸಲು ಸಾಧ್ಯವಾಗಿರಲಿಲ್ಲ.