ಕಳೆದ ಒಂದು ವಾರದಿಂದ ಚಿನ್ನದ ಬೆಲೆಯಲ್ಲಿ ನಿರಂತರವಾಗಿ ಇಳಿಕೆಯಾಗುತ್ತಿರುವುದು ಬಂಗಾರ ಪ್ರಿಯರಿಗೆ ಸಿಹಿ ಸುದ್ದಿಯಾಗಿದೆ. ಬೆಂಗಳೂರಿನಲ್ಲಿ ಇಂದು (ಮಂಗಳವಾರ) ಚಿನ್ನದ ದರದಲ್ಲಿ ಭಾರಿ ಕುಸಿತ ಕಂಡುಬಂದಿದೆ. ಒಂದೇ ದಿನದಲ್ಲಿ ಪ್ರತಿ ಗ್ರಾಂ ಚಿನ್ನದ ಬೆಲೆ 450ರ ರೂಪಾಯಿ ಕಡಿಮೆಯಾಗಿದ್ದು, 10 ಗ್ರಾಂ ಚಿನ್ನದ ಬೆಲೆ 4500 ರೂಪಾಯಿಗಳಷ್ಟು ಇಳಿದಿದೆ. ಇದು ಚಿನ್ನ ಖರೀದಿದಾರರಿಗೆ ಒಂದು ಉತ್ತಮ ಅವಕಾಶವಾಗಿದೆ.